ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಗುಲಾಂ ನಬಿ ಆಜಾದ್ ಪಕ್ಷದ ಪ್ರಾಥಮಿಕ ¸ದಸ್ಯಕ್ಕೆ ರಾಜಿನಾಮೆ ನೀಡಿದ್ದಾರೆ.
ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದಿರುವ ಐದು ಪುಟಗಳ ರಾಜೀನಾಮೆ ಪತ್ರದಲ್ಲಿ ರಾಹುಲ್ ಗಾಂಧಿ ಅವರ ಅಪ್ರಬುದ್ಧತೆಯ ಬಗ್ಗೆ ಕಿಡಿಕರಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ವಿಧೇಯರಾಗಿದ್ದ ಎಷ್ಟೋ ನಾಯಕರು ಪಕ್ಷ ಬಿಟ್ಟು ಹೋಗುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಇಂದಿನ ದುಸ್ಥಿತಿಯನ್ನು ಸಮಗ್ರವಾಗಿ ವಿವರಿಸಿದ್ದ ಗುಲಾಂ ನಬಿ ಆಜಾದ್, ಕಾಂಗ್ರೆಸ್ ಪಕ್ಷದ ಪಾಲಿಗೆ ಸೋನಿಯಾ ಗಾಂಧಿ ಅವರು ಹೆಸರಿಗೆ ಮಾತ್ರ ನಾಯಕರು ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಗುಲಾಂ ನಬಿ ಆಜಾದ್ ಅವರ ಜೊತೆಯಲ್ಲೇ ಅವರ ಅನುಯಾಯಿಗಳೂ ಕೂಡಾ ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಘಟಕಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಂಬರುವ ೨೦೨೪ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಜಾದ್ ರಾಜೀನಾಮೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಎಂದೇ ವಿಶ್ಲೇಷಿಸಲಾಗುತ್ತಿದೆ. ಇನ್ನು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಮುಂದೂಡಿಕೆಯಾಗಿರುವ ಬೆನ್ನಲ್ಲೇ ಆಜಾದ್ ರಾಜೀನಾಮೆ ನೀಡಿದ್ದು, ಪಕ್ಷಕ್ಕೆ ಇರುಸು ಮುರುಸು ಉಂಟು ಮಾಡಿದೆ. ಈ ನಡುವೆ, ಕಾಂಗ್ರೆಸ್ ಪಕ್ಷ ಆಯೋಜಿಸಿರುವ ಭಾರತ್ ಜೋಡೋ ಯಾತ್ರೆಗೂ ದಿನಗಣನೆ ಆರಂಭವಾಗಿದೆ.