ಸೆಪ್ಟೆಂಬರ್ 2ರಂದು ಮಂಗಳೂರಿಗೆ ಪ್ರಧಾನಿ ಮೋದಿ

Modi

ಸೆಪ್ಟೆಂಬರ್ 2ರಂದು ಮಂಗಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ನಡೆಯಲಿರುವ ಸರಕಾರಿ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭರದಿಂದ ಸಿದ್ಧತೆ ನಡೆಯುತ್ತಿದೆ.
ಪ್ರಧಾನಿ ಮೋದಿ ಫಿಶಿಂಗ್ ಬಂದರಿಗೆ ಗುದ್ದಲಿ ಪೂಜೆ, ಎನ್ ಎಂ ಪಿ ಟಿ ರ್ತ್ ಲೋಕಾರ್ಪಣೆ ಮತ್ತು ಮೂರು ಸ್ಟೋರ್ ಟ್ಯಾಂಕ್ ಗೆ ಭೂಮಿ ಪೂಜೆ ಮಾಡಲಿದ್ದಾರೆ.
ಸಮಾವೇಶಕ್ಕೆ ಬರುವ ಕಾರ್ಯಕರ್ತರು, ¸ಸಾರ್ವಜನಿಕರಿಗೆ ಅನುಕೂಲವಾಗಲು ಪ್ರತ್ಯೇಕ ಹೆಚ್ಚುವರಿ ರಸ್ತೆಯನ್ನು ನಿರ್ಮಾಣ ಮಾಡುವ ಕಾರ್ಯವೂ ನಡೆಯುತ್ತಿದೆ.
ಕಾರ್ಯಕ್ರಮದಲ್ಲಿ ಒಂದೂವರೆ ಲಕ್ಷ ಜನರಿಗೆ ವ್ಯವಸ್ಥೆ ಮಾಡಲಾಗುತ್ತಿದೆ. ಪಾಸ್ ಸೋಲ್ಡ್ ಔಟ್ ಆಗಿದೆ. ನಿರೀಕ್ಷೆಗೂ ಮೀರಿ ಜನ ಬರುವ ಸಾಧ್ಯತೆಗಳಿವೆ. ಪ್ರತಿ ವಿಧಾನಸಭಾ ಕ್ಷೇತ್ರದಿಂದ 35 ಸಾವಿರಕ್ಕೂ ಹೆಚ್ಚು ಜನ ಬರುವ ಸಾಧ್ಯತೆಗಳಿವೆ.
ಮೈದಾನ ಸಮೀಪ ಮೂರು ಹೆಲಿಕಾಪ್ಟರ್ ಲ್ಯಾಂಡಿಂಗ್ ಗೆ ಬೇಕಾದ ವ್ಯವಸ್ಥೆ ಮಾಡಲಾಗುತ್ತಿದೆ. ಸಾವಿರಾರು ಬಸ್ ಗಳು ಬರುವ ಸಾಧ್ಯತೆಗಳಿದ್ದು, ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. 25 ಎಕರೆ ಪ್ರದೇಶಕ್ಕೆ ಪೆಂಡಾಲ್ ಹಾಕಲಾಗುತ್ತಿದೆ.
ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Share this post

Scroll to Top