ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಗುರುವಾರ ರಾತ್ರಿ ಪೊಲೀಸರು ವಶಕ್ಕೆ ಪಡೆದು ಬಿಗಿ ಭದ್ರತೆಯಲ್ಲಿ ಬಂಧಿಸಿದ್ದಾರೆ. ಮುರುಘಾ ಶರಣರನ್ನು ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನೆಡೆಸಿದ್ದಾರೆ.
ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದ್ದರೂ ಮುರುಘಾ ಶರಣರನ್ನು ಬಂಧಿಸದೇ ಇರುವುದಕ್ಕೆ ರಾಜ್ಯಾಧ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಮುರುಘಾ ಶರಣರ ಬಂಧನ ಮಠದ ಸುತ್ತ ಭಾರಿ ಪೊಲೀಸ್ಬಿಗಿ ಬಂದೋಬಸ್ತ್ ಮಾಡಲಾಗಿದೆ.