ಪ್ರಜ್ವಲ್ ವಿರುದ್ಧ ಕ್ರಮಕ್ಕೆ ಅಭ್ಯಂತರವಿಲ್ಲ: ಮೌನ ಮುರಿದ ಹೆಚ್.ಡಿ ದೇವೇಗೌಡ
ಲೈಂಗಿಕ ಹಗರಣದಲ್ಲಿ ಆರೋಪಿಯಾಗಿ ಪರಾರಿಯಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮಕ್ಕೆ ನಾನು ಆಕ್ಷೇಪಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಶನಿವಾರ ಹೇಳಿದ್ದಾರೆ.ತಮ್ಮ ಹುಟ್ಟುಹಬ್ಬದ ಅಂಗವಾಗಿ ಜೆ.ಪಿ.ನಗರದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದರಲ್ಲಿ ಭಾಗಿಯಾದ ಪ್ರತಿಯೊಬ್ಬರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ʻಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಮತ್ತು ಪರಿಹಾರ ನೀಡಬೇಕು’ ಒತ್ತಾಯಿಸಿದ್ದಾರೆ.ಹಗರಣಕ್ಕೆ ಸಂಬಂಧಿಸಿದಂತೆ ಮೊದಲ ಪ್ರತಿಕ್ರಿಯೆಯಲ್ಲಿ ರಾಜ್ಯ ಸರ್ಕಾರವು ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಿದ ಬೆನ್ನಲ್ಲೇ