ದರ ಏರಿಕೆಯ ವಿರುದ್ಧ ಬಿಜೆಪಿ ಅಹೋರಾತ್ರಿ ಧರಣಿ

ದರ ಏರಿಕೆಯ ವಿರುದ್ಧ ಬಿಜೆಪಿ ಅಹೋರಾತ್ರಿ ಧರಣಿ

ಕಾಂಗ್ರೆಸ್ ಸರ್ಕಾರದ ದರ ಏರಿಕೆ ನೀತಿಯ ವಿರುದ್ಧ ಬಿಜೆಪಿ ಪಕ್ಷವು ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಬೃಹತ್ ಅಹೋರಾತ್ರಿ ಧರಣಿ ನಡೆಸಲಾಯಿತು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಗ್ಯಾರಂಟಿ ಯೋಜನೆಗಳಿಗೆ ಹಣ ಸರಿದೂಗಿಸಲು ಒಂದಿಲ್ಲೊಂದು ರೀತಿಯಲ್ಲಿ ನಾಡಿನ ಜನತೆಯ ದರ ಏರಿಕೆಯ ಬರೆ ಎಳೆಯುತ್ತಲೇ ಇದೆ ಎಂದು ಬಿಜೆ ಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರರವೆರ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಸಲಾಯಿತು.

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯಿಂದಾಗಿ ಹಾಲು, ಮೊಸರು, ವಿದ್ಯುತ್, ಆಟೋ ಮೊಬೈಲ್ ಪಾರ್ಟ್ಸ್, ಬಸ್ ಪ್ರಯಾಣ ದರ, ಬೆಂಗಳೂರಿನಲ್ಲಿ ಕಸದ ತೆರಿಗೆ, ನೋಂದಣಿ ಮತ್ತು ಮುದ್ರಾಂಕ ಶುಲ್ಕ, ಅಫಿಡವಿಟ್ ಛಾಪಾ ಕಾಗದ, ಎಟಿಎಂ ಚಾರ್ಜ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ದೈನಂದಿನ ಬದುಕಿನ ಮೇಲೆ ಹೊರೆ ಹೊರಿಸಿದೆ ಎಂದು ಆರೋಪಿಸಿ ಎಲ್ಲಾ ದರ ಏರಿಕೆಯ ನಿರ್ಧಾರಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಲಾಯಿತು.

ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌ ಯಡಿಯೂರಪ್ಪ, ಪಕ್ಷದ ರಾಜ್ಯ ಸಹ ಉಸ್ತುವಾರಿಗಳಾದ ಸುಧಾಕರ ರೆಡ್ಡಿ, ಪ್ರತಿಪಕ್ಷ ನಾಯಕರಾದ ಆರ್‌ ಅಶೋಕ, ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಚಕವಾಡಿ ನಾರಾಯಣಸ್ವಾಮಿ ಸೇರಿದಂತೆ ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರುಗಳು, ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Share this post

Scroll to Top