ರಾಜ್ಯಸಭಾ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಅವರು ಮುರುಘಾ ಶರಣರ ವಿರುದ್ದದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಕರ್ನಾಟಕದಿಂದ ಹೊರ ರಾಜ್ಯಕ್ಕೆ ವರ್ಗಾಯಿಸಿ ತನಿಖೆ ನಡೆಸುವುದು ಸೂಕ್ತ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣ ಕುರಿತಾಗಿ ಪತ್ರ ಬರೆದಿರುವ ಅವರು ಪ್ರಭಾವಿ ಮುರುಘಾ ಮಠದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣದಡಿ ಎಫ್ಐಆರ್ ದಾಖಲಾಗಿದೆ. ಶರಣರ ವಿರುದ್ಧ ಇಬ್ಬರು ಅಪ್ರಾಪ್ತ ಬಾಲಕಿಯರು ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಮಾಡಿದ್ದಾರೆ. ಇದು ಅತ್ಯಂತ ಆಘಾತಕಾರಿ ಹಾಗೂ ದುಖಃಕರ ಘಟನೆಯಾಗಿದೆ ಎಂದಿದ್ದಾರೆ.
ಪ್ರಕರಣದ ನಿಷ್ಪಕ್ಷಪಾತ ತನಿಖೆ ಆಗಬೇಕು. ಸರ್ಕಾರ ಹಾಗೂ ಯಾವುದೇ ರಾಜಕೀಯ ಪಕ್ಷಗಳ ಒತ್ತಡ ಮತ್ತು ಹಸ್ತಕ್ಷೇಪ ಇಲ್ಲದಂತೆ ನೋಡಿಕೊಳ್ಳಬೇಕು ಹಾಗೂ ಬಾಲಕಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯದಂತಹ ಘಟನೆ ನಮ್ಮ ಸುತ್ತಮುತ್ತಲಿನ ಜನರು ಮತ್ತಷ್ಟು ಆತಂಕಕ್ಕೆ ದೂಡಿದಂತಾಗುತ್ತದೆ.